ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 240 ಮಂದಿ ಮೃತ್ಯು: ವರದಿ
Update: 2025-06-12 18:08 IST
Photo: The Hindu
ಅಹಮದಾಬಾದ್: ಗುರುವಾರ ಮಧ್ಯಾಹ್ನ ಪತನಗೊಂಡ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗಾಟ್ವಿಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 240 ಮಂದಿ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
"ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ" ಎಂದು ಪೊಲೀಸ್ ಕಮಿಷನರ್ ಜಿ.ಎಸ್. ಮಲಿಕ್ ಅವರು ಅಸೋಸಿಯೇಟೆಡ್ ಪ್ರೆಸ್ ಗೆ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿರುವುದರಿಂದ, "ಪತನಗೊಂಡ ಸ್ಥಳದಲ್ಲಿದ್ದ ಸ್ಥಳೀಯರೂ ಮೃತಪಟ್ಟಿರುವ ಸಾಧ್ಯತೆಯಿದೆ" ಎಂದು ಅವರು ಹೇಳಿದರು.