×
Ad

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹೆನ್ರಿಕ್ ಕ್ಲಾಸೆನ್

Update: 2025-06-02 15:48 IST

ದಕ್ಷಿಣ ಆಫ್ರಿಕಾದ ಬ್ಯಾಟರ್‌ ಹೆನ್ರಿಕ್ ಕ್ಲಾಸೆನ್ | Photo: PTI

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಸೋಮವಾರ ನಿವೃತ್ತಿ ಘೋಷಿಸಿದ್ದಾರೆ.

ಕ್ಲಾಸೆನ್ ಅವರು ಫೆಬ್ರವರಿ 2018 ರಲ್ಲಿ ಕೇಪ್ ಟೌನ್‌ನಲ್ಲಿ ಭಾರತ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಸ್ಥಿರತೆಯೊಂದಿಗೆ ಆಟವಾಡುತ್ತಿದ್ದ ಅವರು ಟಿ20 ಲೀಗ್‌ ಗಳಲ್ಲಿ ಹೆಚ್ಚು ಬೇಡಿಕೆಯಿರುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

"ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯಲು ನಿರ್ಧರಿಸಿದ್ದೇನೆ ಎಂದು ಘೋಷಿಸುತ್ತಿರುವ ಈ ದಿನ ನನಗೆ ದುಃಖದ ದಿನ. ಭವಿಷ್ಯದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಯಾವುದು ಉತ್ತಮ ಎಂದು ನಿರ್ಧರಿಸಲು ನನಗೆ ಬಹಳ ಸಮಯ ಹಿಡಿಯಿತು. ಇದು ನಿಜಕ್ಕೂ ತುಂಬಾ ಕಷ್ಟಕರವಾದ ನಿರ್ಧಾರವಾಗಿತ್ತು. ನನ್ನ ನಿರ್ಧಾರಕ್ಕೆ ನನಗೆ ತೃಪ್ತಿಯಿದೆ" ಎಂದು ಅವರು Instagram ನಲ್ಲಿನ ಪೋಸ್ಟ್‌ನಲ್ಲಿ ವಿದಾಯ ಪೋಸ್ಟ್ ನಲ್ಲಿ ಬರೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News