×
Ad

ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ಸರಣಿ ಸಾವು: ನಾಳೆ ಬಾಂಬೆ ಹೈಕೋರ್ಟ್ ನಲ್ಲಿ ತುರ್ತು ವಿಚಾರಣೆ

ಕಳೆದೆರಡು ದಿನಗಳಿಂದ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಗುರುವಾರ ತುರ್ತು ವಿಚಾರಣೆಗೆ ಆದೇಶ ನೀಡಿದೆ.

Update: 2023-10-04 17:34 IST

ಮುಂಬೈ: ಕಳೆದೆರಡು ದಿನಗಳಿಂದ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಗುರುವಾರ ತುರ್ತು ವಿಚಾರಣೆಗೆ ಆದೇಶ ನೀಡಿದೆ.

ಮಹಾರಾಷ್ಟ್ರದ ಎರಡು ಆಸ್ಪತ್ರೆಗಳಲ್ಲಿ 72 ಗಂಟೆಗಳಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಆರಿಫ್ ಡಾಕ್ಟರ್ ಅವರ ವಿಭಾಗೀಯ ಪೀಠವು ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಮೀಸಲಿಟ್ಟಿರುವ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News