LIVE | ಕೇಂದ್ರ ಬಜೆಟ್ 2025: 12 ಲಕ್ಷ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ
ಹೊಸದಿಲ್ಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಸತತವಾಗಿ ಎಂಟನೇ ಬಾರಿ ಮಂಡಿಸಲಿರುವ ಬಜೆಟ್ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮೂರನೇ ಅವಧಿಯಲ್ಲಿ ನಿರ್ಮಲಾ ಅವರು ಮಂಡಿಸಿದ ಎರಡನೇ ಪೂರ್ಣ ಬಜೆಟ್ ಇದಾಗಲಿದೆ. ನಿರ್ಮಲಾ ಸೀತಾರಾಮನ್ ಅವರು ವಿತ್ತ ಸಚಿವೆಯಾಗಿ ಈವರೆಗೆ ಒಟ್ಟು ಆರು ಬಜೆಟ್ಗಳನ್ನು ಹಾಗೂ ಎರಡು ಮಧ್ಯಂತರ ಬಜೆಟ್ಗಳನ್ನು ಮಂಡಿಸಿದ್ದಾರೆ.
ಕಳೆದ ವರ್ಷದಂತೆ ಈ ವರ್ಷವೂ ಬಜೆಟ್ ಸಂಪೂರ್ಣ ಡಿಜಿಟಲ್ ಆಗಲಿದ್ದು, ಈ ಪದ್ಧತಿ ಈ ವರ್ಷವೂ ಮುಂದುವರಿಯಲಿದೆ.
ಫೆ.3 ಸೋಮವಾರಕ್ಕೆ ಸಂಸತ್ ಅಧಿವೇಶನ ಮುಂದೂಡಿಕೆ
ಬಜೆಟ್ ಮಂಡನೆ ಮುಕ್ತಾಯಗೊಳಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
12 ಲಕ್ಷ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ
ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿ ಮಿತಿಯನ್ನು 1 ಲಕ್ಷ ರೂ.ಗೆ ಹೆಚ್ಚಳ
ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿ 2.4 ಲಕ್ಷ ರೂ.ನಿಂದ 6 ಲಕ್ಷ ರೂ.ಗೆ ಏರಿಕೆ.
ಲೀಥಿಯಂ ಅಯಾನ್ ಬ್ಯಾಟರಿ ತಯಾರಕರಿಗೆ ಹೆಚ್ಚಿನ ಉತ್ತೇಜನ
ಮೀನುಗಾರಿಕಾ ಉತ್ಪನ್ನಗಳ ಉತ್ತೇಜನೆಗೆ ಶೇ. 30ರಿಂದ ಶೇ. 5ಕ್ಕೆ ತೆರಿಗೆ ಇಳಿಕೆ
6 ಜೀವರಕ್ಷಕ ಔಷಧಿಗಳಿಗೆ ಶೇ.5 ರಷ್ಟು ಸುಂಕ
ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30 ಔಷಧಗಳಿಗೆ ಆಮದು ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ.
ಸಾರ್ವಜನಿಕ ಬ್ಯಾಂಕ್‌ಗಳ ಮೂಲಕ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸೌಲಭ್ಯಗಳ ವಿಸ್ತರಣೆ