×
Ad

ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

Update: 2023-08-07 10:57 IST

Photo: facebook.com/spandana.vijay

ಬೆಂಗಳೂರು: ಕನ್ನಡ ಚಲನಚಿತ್ರ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್‌ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ತಕ್ಷಣವೇ ಬ್ಯಾಂಕಾಕ್‌ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ತರುವ ಸಾದ್ಯತೆಯಿದೆ ಎನ್ನಲಾಗುತ್ತಿದೆ.

ಸ್ಪಂದನಾ ಅವರ ಅಕಾಲಿಕ ಸಾವಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News