×
Ad

ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ... ... ಮೂರನೇ ಬಾರಿ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ತೃತೀಯಲಿಂಗಿಗಳು, ನೈರ್ಮಲ್ಯ ಕಾರ್ಯಕರ್ತರು

ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ನೂತನ ಸಂಸತ್ತಿನ ಸಂಕೀರ್ಣವನ್ನು ನಿರ್ಮಿಸಿದ ಕಾರ್ಮಿಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ತೃತೀಯಲಿಂಗಿಗಳು ಭಾಗವಹಿಸಲಿದ್ದಾರೆ.

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹೊಸ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಈಗಾಗಲೇ ಅವರಿಗೆಲ್ಲ ಆಹ್ವಾನ ನೀಡಲಾಗಿದೆ.

ಸಮಾರಂಭಕ್ಕೂ ಮೊದಲು, ಬಿಜೆಪಿ ಸಂಸದ ಮತ್ತು ಮಾಜಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ತೃತೀಯಲಿಂಗಿ ಸಮುದಾಯದ ಸದಸ್ಯರನ್ನು ಅಭಿನಂದಿಸಿದರು. ಬಿಜೆಪಿ ಸಂಸದ ಮತ್ತು ಮಾಜಿ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ನೈರ್ಮಲ್ಯ ಕಾರ್ಯಕರ್ತರನ್ನು ಸನ್ಮಾನಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದೇ ಮೊದಲ ಬಾರಿಗೆ ತೃತೀಯಲಿಂಗಿ ಸಮುದಾಯದ ಜನರನ್ನು ಪ್ರಮಾಣ ವಚನ ಸಮಾರಂಭಕ್ಕೆ ಔಪಚಾರಿಕವಾಗಿ ಆಹ್ವಾನಿಸಲಾಗಿದೆ ಎಂದು ವೀರೇಂದ್ರ ಕುಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದೇ ವೇಳೆ ಕೇಂದ್ರದ ಮಾಜಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನೂತನ ಸಂಸತ್ ಭವನ ನಿರ್ಮಾಣದಲ್ಲಿ ಶ್ರಮಿಸಿದ್ದ 90 ಕಾರ್ಮಿಕರು ಮತ್ತು 30 ನೈರ್ಮಲ್ಯ ಕಾರ್ಯಕರ್ತರನ್ನು ಸನ್ಮಾನಿಸಿದರು.

Update: 2024-06-09 12:41 GMT

Linked news