ಸೂಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗೆ ಜಾಮೀನು; ಸಂತ್ರಸ್ತರ ಕುಟುಂಬದಿಂದ ಪ್ರತಿಭಟನೆ
Update: 2025-11-14 16:32 IST
ಚಾಮರಾಜನಗರ : ಕಳೆದ ಕೆಲವು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಬಳಿಯ ಕಿಚ್ಚಗುತ್ತಿ ಮಾರಮ್ಮ ದೇವಾಲಯಲ್ಲಿ ವಿಷ ಮಿಶ್ರಿತ ಪ್ರಸಾದ ವಿತರಣೆಯಲ್ಲಿ 17 ಮಂದಿ ಸಾವನ್ನಪ್ಪಿದ್ದ ಪ್ರಕರಣದ ಪ್ರಮುಖ ಆರೋಪಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಖಂಡಿಸಿದ ಮೃತ ವ್ಯಕ್ತಿಗಳ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದ ಆವರಣದಲ್ಲಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್ ನ್ಯಾಯಾಧೀಶರು ಇಮ್ಮಡಿ ಮಹದೇವಸ್ವಾಮಿಗೆ ನೀಡಿರುವ ಜಾಮೀನು ಆದೇಶವನ್ನು ಮರು ಪರಿಶೀಲಿಸಿ, ಜಾಮೀನನ್ನು ರದ್ದುಪಡಿಸಿಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.