ಹನೂರು ಶೂಟೌಟ್ ಪ್ರಕರಣ : ಅರಣ್ಯ ಇಲಾಖೆಯ ಜೀಪು ದ್ವಂಸ
Update: 2026-08-16 18:27 IST
ಚಾಮರಾಜನಗರ / ಹನೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕೌದಳ್ಳಿ ವನ್ಯಜೀವಿ ವಲಯದ ಎಲ್‌ಪಿಎಸ್ ಕ್ಯಾಂಪ್ ಬಳಿ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಯನ್ನು ತಡೆದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಇಲಾಖಾ ಜೀಪ್ ಧ್ವಂಸಗೊಳಿಸಿದ ಘಟನೆ ನಡೆದಿರುವುದು ವರದಿಯಾಗಿದೆ.
ಎರಡು ಬೈಕ್‌ಗಳಲ್ಲಿ ಬಂದಿದ್ದ ಐವರು, ಸಿಬ್ಬಂದಿಯನ್ನು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಜೀಪ್‌ನ ಮುಂಭಾಗದ ಗಾಜು, ಚಾಲಕನ ಸೀಟ್ ಹಾಗೂ ಟಾರ್ಪಲ್‌ಗೆ ಹಾನಿ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಬೈಕ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಕುರಿತು ರಾಮಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.