ಚಾಮರಾಜನಗರ | ವಿಶೇಷ ಚೇತನ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ಆರೋಪ; 13 ವರ್ಷಗಳ ಬಳಿಕ ಬೆಳಕಿಗೆ
ಸಾಂದರ್ಭಿಕ ಚಿತ್ರ | PC : freepik.com
ಚಾಮರಾಜನಗರ : ವಿಶೇಷಚೇತನ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, 13 ವರ್ಷಗಳ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ.
ಸಂತ್ರಸ್ತಯ ಕೊಳ್ಳೇಗಾಲದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ್ದ ಗಂಭೀರ ಆರೋಪ ಇದಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಹಳೆಯ ವಿದ್ಯಾರ್ಥಿಗಳ ಸಭೆ ಏರ್ಪಡಿಸಿದ್ದ ವೇಳೆ ಶಿಕ್ಷಕ ಬೆನ್ನಿ ವರ್ಕೀಸ್ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಈಗ ಪಾಪ್ತಳಾಗಿದ್ದು ಒಂದು ಮಗುವಿನ ತಾಯಿಯಾಗಿದ್ದಾರೆ. 2012-2013 ಸಾಲಿನಲ್ಲಿ ಕೊಳ್ಳೇಗಾಲ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಈ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಆ ಸಮಯದಲ್ಲಿ ಅಪ್ರಾಪ್ತಳಾದ ಕಾರಣ, ಸದ್ಯ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಸನ್ ಶೈನ್ ಚಿಲ್ಡರ್ನ್ ಕ್ಯಾಂಪಸ್ ಸಿಇಒ ಸಂಜೀವ್ ಸದಾನಂದ ಮಹಾಪುರ ಎಂಬವರು ನೀಡಿದ ದೂರಿನ ಮೇಲೆ ಎಫ್‍ಐಆರ್ ದಾಖಲಾಗಿದೆ. ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಶಾಲೆಯಿಂದ ಶಿಕ್ಷಕ ಬೆನ್ನಿ ವರ್ಕೀಸ್ ಅವರನ್ನು ಅಮಾನತು ಮಾಡಲಾಗಿದೆ.