×
Ad

ದಿಲ್ಲಿ ಕಾರು ಸ್ಫೋಟ ಕೇಂದ್ರದ ಭದ್ರತಾ ವೈಫಲ್ಯಕ್ಕೆ ಕನ್ನಡಿ: ಸಚಿವ ವೆಂಕಟೇಶ್

Update: 2025-11-12 12:36 IST

ಚಾಮರಾಜನಗರ: ಕಳೆದೆರಡು ದಿನಗಳ ಹಿಂದೆ ದೇಶದ ರಾಜಧಾನಿ ದಿಲ್ಲಿಯ ಕೆಂಪುಕೋಟೆ ಬಳಿ ಸಂಭವಿಸಿರುವ ಕಾರು ಸ್ಫೋಟ ಪ್ರಕರಣವು ಕೇಂದ್ರದ ಗುಪ್ತಚರ ಇಲಾಖೆ ಹಾಗೂ ಭದ್ರತಾ ವೈಫಲ್ಯಕ್ಕೆ ಕನ್ನಡಿಯಾಗಿದೆ ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಸಚಿವರ ನೇತೃತ್ವದಲ್ಲಿ ನಡೆಯುವ ಕೆ.ಡಿ.ಪಿ ಸಭೆಗೆ ಭಾಗವಹಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿಲ್ಲಿಯ ಕೇಂದ್ರ ಸ್ಥಾನದಲ್ಲಿ ಕಾರು ಸ್ಫೋಟ ಆಗಿರುವುದು ನಿಜಕ್ಕೂ ದುರಂತವೇ ಎನ್ನಬಹುದು. ಕೇಂದ್ರ ಸರಕಾರವು ಕೂಡಲೇ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಬಿಹಾರದಲ್ಲಿ ನಡೆದಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟವು ಬಹುಮತ ಪಡೆಯಲಿದೆ. ಎನ್ಡಿಎ ಹಾಗೂ ಇಂಡಿಯಾ ಮೈತ್ರಿ ಕೂಟಕ್ಕೆ 10-15 ಸ್ಥಾನಗಳ ಅಂತರ ಬರಬಹುದು, ಮತ ಎಣಿಕೆಯ ಬಳಿಕ ನಿಖರ ಫಲಿತಾಂಶ ಸಿಗಲಿದೆ ಎಂದು ಸಚಿವ ಕೆ. ವೆಂಕಟೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಂಬೇಡ್ಕರ್ ಭಾವಚಿತ್ರ ಇರುವ ಫ್ಲೆಕ್ಸ್ ಹರಿದ ಪ್ರಕರಣ ಹಾಗೂ ಬುದ್ದ ವಿಗ್ರಹ ದ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ನಾಯಕ ಸಮುದಾಯದವರು ನ15 ರಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ವೆಂಕಟೇಶ್, ಜ್ಯೋತಿಗೌಡನಪುರ ಗ್ರಾಮದ ಪ್ರಕರಣದಲ್ಲಿ ಪೊಲೀಸರು ಸಾಕ್ಷ್ಯ ಸಮೇತವಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಇಲ್ಲಿ ಅಮಾಯಕರನ್ನು ಬಂಧಿಸುವ ಪ್ರಶ್ನೆಯೇ ಇಲ್ಲ, ಪೊಲೀಸರು ಮತ್ತಷ್ಟು ತನಿಖೆ ನಡೆಸಿ ಬೇರೆ ಯಾರಾದರೂ ಅಪರಾಧಿಗಳಿದ್ದರೆ ಅವರನ್ನು ಬಂಧಿಸಿ ಕ್ರಮ ಜರುಗಿಸುವರು ಹಾಗೂ ನ.15 ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News