ಆಕ್ಸಿಜನ್ ದುರಂತ ಪ್ರಕರಣ | ಸಿಎಂಗೆ ಅಂತಿಮ ತನಿಖಾ ವರದಿ ಸಲ್ಲಿಸಿದ ನ್ಯಾ.ಕುನ್ಹಾ ಸಮಿತಿ
ಚಾಮರಾಜನಗರ : ಕಳೆದ ಐದು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸದಿಂತೆ ರಾಜ್ಯ ಸರಕಾರ ನಿಯೋಜಿಸಿದ್ದ ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹಾ ರವರ ನೃತೃತ್ವದ ಸಮಿತಿ ಅಂತಿಮ ತನಿಖಾ ವರದಿಯನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದೆ.
ಕಳೆದ ಐದು ವರ್ಷಗಳ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೊಂಕಿನಿಂದ ಬಳಲುತ್ತಿದ್ದ ಸೋಂಕಿತರಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದರು.
ಈ ಕುರಿತ ರಾಜ್ಯ ಸರಕಾರ ತನಿಖೆಗೆ ರಚಿಸಲಾಗಿದ್ದ ನ್ಯಾ. ಮೈಕಲ್ ಡಿ.ಕುನ್ಹಾನೇತೃತ್ವದ ಸಮಿತಿಯು ಇದೀಗ ಮುಖ್ಯಮಂತ್ರಿಗಳಿಗೆ ಅಂತಿಮ ವರದಿ ಸಲ್ಲಿಸಿದ್ದು, ದುರಂತ ಬಗ್ಗೆ ಯಾವ ಅಂಶಗಳನ್ನು ಉಲ್ಲೇಖಿಸಲಾಗಿದೆ ಹಾಗೂ ಯಾರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
2021ರ ಮೇ 2 ಹಾಗೂ 3 ರ ನಡುವ ನಡೆದ ಈ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ರೋಗಿಗಳು ಮೃತಪಟ್ಟಿದ್ದರು. ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪ ಕೇಳಿ ಬಂದಿತ್ತು. ಈ ಘಟನೆ ಕುರಿತು ಆಗಿನ ಬಿಜೆಪಿ ಸರಕಾರ ನ್ಯಾಯಾಂಗ ಆಯೋಗದ ತನಿಖೆಗಾಗಿ ನ್ಯಾ. ಬಿ.ಎ.ಪಾಟೀಲ್ ಆಯೋಗ ರಚನೆ ಮಾಡಲಾಗಿತ್ತು. ಆದರೆ, ಆಯೋಗದ ವರದಿ ಬಗ್ಗೆ ಸಮಾಧಾನಗೊಳ್ಳದ ಈಗಿನ ಸರಕಾರ ಮರು ತನಿಖೆ ನಡೆಸಿ ವರದಿ ನೀಡುವಂತೆ ನ್ಯಾ.ಕುನ್ಹಾ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿತ್ತು. ಅದರಂತೆ ಸಮಿತಿಯು ತನಿಖೆ ನಡೆಸಿ ಅಂತಿಮ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಸಲ್ಲಿಸಿದೆ.
ನಿವೃತ್ತ ನಾ, ಮೈಕಲ್ ಡಿ. ಕುನ್ಹಾಅವರು ತನಿಖಾ ವರದಿ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್‍ರವರು ಉಪಸ್ಥಿತರಿದ್ದರು.