×
Ad

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

Update: 2023-09-04 09:39 IST

ಚಾಮರಾಜನಗರ: ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಗುಡ್ಡಮಾದಶೆಟ್ಟಿ, ಭಾಗ್ಯಮ್ಮ ದಂಪತಿಯ ಮಗ ಸ್ವಾಮಿ (23) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರತೆಗೆದು, ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಮೃತದೇಹವನ್ನು ಒಪ್ಪಿಸಿದ್ದಾರೆ.

ಮೃತ ಯುವಕ ಸ್ವಾಮಿ ಕೂಲಿ ಕೆಲಸ ಮಾಡಿ ಕೊಂಡಿದ್ದು, ಈತನ ಸಾವಿಗೆ ಕಾರಣ ತಿಳಿದು ಬಂದಿಲ್ಲ, ಮಾನಸಿಕ ಖಿನ್ನತೆಯಿಂದ ಸಾವಿಗೀ ಡಾಗಿರಬಹುದು ಎಂದು ಶಂಕಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News