×
Ad

ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರ ಪತ್ನಿ ಗೌರಮ್ಮ ನಿಧನ

Update: 2025-02-07 12:36 IST

ಚಾಮರಾಜನಗರ : ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯರವರ ಪತ್ನಿಗೌರಮ್ಮ ಅವರು ಶುಕ್ರವಾರ ಬೆಳಗ್ಗೆ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ಗೌರಮ್ಮ ಅವರು ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಳಗ್ಗೆ ಮೃತರಾದರು.

ಮೃತರು ಶಾಸಕ ಎ.ಆರ್. ಕೃಷ್ಣ ಮೂರ್ತಿ, ಜಿಪಂ ಮಾಜಿ ಸದಸ್ಯ ಆರ್.ಬಾಲರಾಜು, ಅಳಿಯ ನಿವೃತ್ತ ಪೊಲೀಸ್ ಅಧಿಕಾರಿ ಮರಿಸ್ವಾಮಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಮೈಸೂರಿನ ಸರಸ್ವತಿ ಪುರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸಂಜೆ 4ರ ತನಕ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿರುವ ದಿ.ಬಿ.ರಾಚಯ್ಯ ಅವರ ಸ್ಮಾರಕ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶನಿವಾರ ಬೆಳಗ್ಗೆ 11 ರಿಂದ ಮದ್ಯಾಹ್ನ 1 ರ ತನಕ ಗೌರಮ್ಮರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News