×
Ad

ಬಂಡೀಪುರ | ತಾಯಿ ಸಹಿತ ಮೂರು ಹುಲಿ ಮರಿಗಳನ್ನು ಸೆರೆ ಹಿಡಿದ ಅರಣ್ಯ ಇಲಾಖೆ

Update: 2025-11-10 09:42 IST

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಣ್ಣು ಹುಲಿಯೊಂದಿಗೆ ಮೂರು ಮರಿಹುಲಿಗಳನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರವಿವಾರ ರಾತ್ರಿ ಮೂರು ಹುಲಿಮರಿಗಳು ಹಾಗೂ ಹೆಣ್ಣು ಹುಲಿಯನ್ನು ಅರಣ್ಯ ಇಲಾಖೆಯವರು ಸರೆ ಹಿಡಿಯುವ ಮೂಲಕ ರೈತರಲ್ಲಿ ಆತಂಕವನ್ನು ದೂರ ಮಾಡಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬಳಿ ಇರುವ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಸಮೀಪ ಈ ಹುಲಿಗಳು ಪತ್ತೆಯಾಗಿದ್ದವು. ಅವುಗಳನ್ನು ಸೆರೆ ಹಿಡಿದಿರುವ ಅರಣ್ಯ ಇಲಾಖೆಯ ಸಿಬ್ಬಂದಿ, ಮೈಸೂರಿನ ಕೂರ್ಗಳ್ಳಿ ಬಳಿ ಇರುವ ವನ್ಯಜೀವಿಗಳ ಪುನರ್ವಸತಿ ಕೇಂದ್ರಕ್ಕೆ ಸಾಗಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News