×
Ad

ಚಾಮರಾಜನಗರ | ಸಿಮ್ಸ್ ಆಸ್ಪತ್ರೆಯಲ್ಲಿ ತಾಯಿ-ಮಗು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Update: 2025-08-04 13:03 IST

ಚಾಮರಾಜನಗರ : ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ವಿಜ್ಞಾನಗಳ ಬೋಧನಾ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರವಿವಾರ ತಾಯಿ-ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.

ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನಪಾಳ್ಯ ಗ್ರಾಮದ ಭಾಗ್ಯ ಎಂಬುವವರನ್ನು ಹೆರಿಗೆಗಾಗಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯ ತಾಯಿ-ಮಕ್ಕಳು ವಿಭಾಗಕ್ಕೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಸಹಜ ಹೆರಿಗೆ ಆಗುತ್ತದೆ ಎಂದು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಕೆಲವೇ ಕ್ಷಣದಲ್ಲಿ ಸಿಸೇರಿಯನ್‌ ಮೂಲಕ ಹೆರಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ ಬಳಿಕ, ಹೆರಿಗೆಯ ವೇಳೆ ತಾಯಿ ಮತ್ತು ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ ಎಂದು ಮೃತರ ಪತಿ ಮಧು ಮಾಹಿತಿ ನೀಡಿದರು.

ಸಿಮ್ಸ್ ಆಸ್ಪತ್ರೆಯಲ್ಲಿ ತಾಯಿ-ಮಗು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ʼಇಲ್ಲಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದಾದರೇ ಮೈಸೂರಿಗೆ ಕರೆದುಕೊಂಡು ಹೋಗಿ ಎಂದು ಹೇಳಬಹುದಿತ್ತು. ಆದರೇ ಅನ್ಯಾಯವಾಗಿ ತಾಯಿ-ಮಗುವನ್ನು ಸಾಯಿಸಿದರುʼ ಎಂದು ಸಂಬಂಧಿಕರು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News