×
Ad

Chamarajanagar | ವಿದ್ಯುತ್‌ ಸ್ಪರ್ಶಿಸಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತ್ಯು; ಇಬ್ಬರಿಗೆ ಗಾಯ

Update: 2026-02-27 02:02 IST

ಸಾಂದರ್ಭಿಕ ಚಿತ್ರ

ಚಾಮರಾಜನಗರ : ಕಟ್ಟಡ ಕಾಮಗಾರಿ ನಡೆಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಇನ್ನಿಬ್ಬರು ಕಾರ್ಮಿಕರು ಗಾಯಗೊಂಡಿರುವ ಘಟನೆ ಚಾಮರಾಜನಗರ ಸಮೀಪದ ರಾಮಸಮುದ್ರದಲ್ಲಿ ವರದಿಯಾಗಿದೆ.

ಚಾಮರಾಜನಗರ ರಾಮಸಮುದ್ರದ ಕುಲುಮೆ ರಸ್ತೆಯಲ್ಲಿ ಕಟ್ಟಡ ಕಾಮಗಾರಿ ನಡೆಯುವಾಗ ಕಾಲಾವಧಿ ಹಾಕಿಕೊಂಡು ಮೊದಲ ಮಹಡಿಗೆ ಗಾರೆ ಕೆಲಸ ಮಾಡುವಾಗ ನಾಗಣ್ಣ (40) ಎಂಬ ಕಾರ್ಮಿಕನಿಗೆ ಮನೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಗೊತ್ತಾಗಿದ್ದು, ನಾಗೇಂದ್ರ ಹಾಗೂ ವಿಷಕಂಠ ಎಂಬವರಿಗೆ ಗಾಯವಾಗಿದ್ದು, ಗಾಯಗೊಂಡ ಕಾರ್ಮಿಕರನ್ನು ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಮ್ಸ್ ಆಸ್ಪತ್ರೆಗೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಘಟನೆಗೆ ಸಂಬಂಧಪಟ್ಟಂತೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News