×
Ad

ಚಾಮರಾಜನಗರ | 77ನೇ ಗಣರಾಜ್ಯೋತ್ಸವ: ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಧ್ವಜಾರೋಹಣ

ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು

Update: 2026-01-26 10:31 IST

ಚಾಮರಾಜನಗರ: 77ನೇ ಗಣರಾಜ್ಯೋತ್ಸವ ಸಮಾರಂಭವು ಚಾಮರಾಜನಗರ ಜಿಲ್ಲಾ ಕೇಂದ್ರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಿತು.

ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ತೆರೆದ ವಾಹನದಲ್ಲಿ ಸಂಚರಿಸಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಸಂದೇಶ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News