×
Ad

ಚಾಮರಾಜನಗರ | ಗಾಂಜಾ ಸಾಗಾಟ ಆರೋಪ : ನಾಲ್ವರು ಸೆರೆ

Update: 2024-06-30 16:53 IST

ಆರೋಪಿಗಳಿಂದ ವಶಪಡಿಸಿಕೊಂಡ ಗಾಂಜಾ

ಚಾಮರಾಜನಗರ : ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದಂತಹ ನಾಲ್ಕು ಮಂದಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಬಂಧಿತ ಆರೋಪಿಗಳನ್ನು ಮ್ಯೆಸೂರು ಮೂಲದ ಪ್ರದೀಪ್( 23) ಪ್ರೀತಮ್ (26) ಶ್ರೇಯಸ್(24) ಅಭಿಷೇಕ್( 25 ) ಎಂದು ಗುರುತಿಸಲಾಗಿದೆ.

ಬಂಧಿತರು ಬೈಕ್ ನಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ವಿಷಯ ತಿಳಿದ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಕೂಡಲೇ ನಾಲ್ವರನ್ನು ಬಂಧಿಸಿ ಸುಮಾರು 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ  ಎಂದು ತಿಳಿದು ಬಂದಿದೆ.

ಈ ಸಂಬಂಧ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News