×
Ad

ಚಾಮರಾಜನಗರ| ಬೈಕ್- ಭತ್ತ ಕಟಾವು ಲಾರಿ ನಡುವೆ ಢಿಕ್ಕಿ : ಒಂದೇ ಕುಟುಂಬದ ನಾಲ್ವರ ಮೃತ್ಯು

Update: 2024-01-15 13:15 IST

ಚಾಮರಾಜನಗರ: ಮಕರ ಸಂಕ್ರಾಂತಿ ಹಬ್ಬದಂದೇ ಭತ್ತ ಕಟಾವು ಮಾಡುವ ಲಾರಿ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ್(32), ಸೌಮ್ಯ(27) ಹಾಗೂ ಮಗಳು ನಿತ್ಯಸಾಕ್ಷಿ (4) ಸ್ಥಳದಲ್ಲೆ ಮೃತ  ಪಟ್ಟಿದ್ದಾರೆ. ಗಾಯಗೊಂಡ ಮಗ ಅಭಿ(9) ಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕೊಳ್ಳೆಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News