×
Ad

ಚಾಮರಾಜನಗರ: ಆನೆ ದಾಳಿಯಿಂದ ತಪ್ಪಿಸಿಕೊಂಡ ಬೈಕ್‌ ಸವಾರ; ಅಪಾಯದಿಂದ ಪಾರು

Update: 2024-10-19 12:38 IST

ಚಾಮರಾಜನಗರ: ಕರ್ನಾಟಕ ತಮಿಳುನಾಡು ಸಂಪರ್ಕ ಹೊಂದಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಗಳು ಬೈಕ್ ಸವಾರನ ಮೇಲೆ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬಂಡೀಪುರ ಊಟಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆಗಳು ಬರುತ್ತಿದ್ದು, ರಸ್ತೆಯಲ್ಲಿ ಬೈಕ್ ಸವಾರ ಹೋಗುತ್ತಿರುವುದನ್ನು ಕಂಡ ಕಾಡಾನೆಗಳು ಬೈಕ್ ಸವಾರ ಮೇಲೆ ದಾಳಿ ನಡೆಸಿವೆ.

ಕೂಡಲೇ ಬೈಕ್ ಸವಾರ ಎದ್ದು ಬಿದ್ದು ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡ ದೃಶ್ಯ ಇತರ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಕಾಡಿನ ಪ್ರದೇಶದೊಳಗೆ ಇರುವ ರಸ್ತೆಯಲ್ಲಿ ಸಂಚಾರ ಮಾಡುವವರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News