×
Ad

ಚಾಮರಾಜನಗರ: ಬಸ್- ಟೆಂಪೋ ಢಿಕ್ಕಿ; ವಾಹನ ಸಂಚಾರ ಅಸ್ತವ್ಯಸ್ತ

Update: 2024-06-24 11:19 IST

ಚಾಮರಾಜನಗರ: ಬಸ್ಸು ಮತ್ತು ಟೆಂಪೋ ಮುಖಾಮುಖಿ ಢಿಕ್ಕಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಪೊಲೀಸ್ ಚೆಕ್ ಪೋಸ್ಟ್ ಬಳಿ ಸೋಮವಾರ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು.

ಮುಂಜಾನೆ ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಲ್ಲಡಾ ಸಂಸ್ಥೆಯ ಐಷಾರಾಮಿ ಬಸ್ ಮತ್ತು ಕೇರಳ ನೋಂದಣಿಯ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ಸಿನ ಎಡಭಾಗಕ್ಕೆ ಹಾನಿಯಾಗಿದ್ದು ಲೇಲ್ಯಾಂಡ್ ವಾಹನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. 

ಪ್ರಾಣಾಪಾಯದಿಂದ ಪಾರಾದ ಟೆಂಪೋ ಚಾಲಕನನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ, ಈ ಸಂಬಂಧ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News