×
Ad

ಚಾಮರಾಜನಗರ : ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು

Update: 2024-10-03 08:26 IST

ಚಾಮರಾಜನಗರ :  ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್ ಬಳಿ ನಡೆದಿದೆ.

ಸೋಮಹಳ್ಳಿ ಗ್ರಾಮದ ಮಹದೇವಸ್ವಾಮಿ ಎಸ್ಎಲ್(46) ಮೃತಪಟ್ಟವರು.  ಗುಂಡ್ಲುಪೇಟೆ ಕಡೆಯಿಂದ ಸೋಮಹಳ್ಳಿ ಗ್ರಾಮದ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ಇವರಿಗೆ ಕಾರು ಢಿಕ್ಕಿಯಾಗಿ ತೀವ್ರ ಗಾಯಗಳಾಗಿತ್ತು ಎನ್ನಲಾಗಿದೆ. ಕೂಡಲೇ ಇವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ  ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News