×
Ad

ಚಾಮರಾಜನಗರ: ಕಾರು ಢಿಕ್ಕಿಯಾಗಿ ಜಿಂಕೆ ಸಾವು

Update: 2026-06-07 21:24 IST

ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಜಿಂಕೆಯೊಂದಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಚುಕ್ಕಿ ಜಿಂಕಿಯೊಂದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ-ನಂಜನಗೂಡು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚುಕ್ಕಿ ಜಿಂಕೆಯೊಂದು ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಜಿಂಕೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

 ಘಟನಾ ಸ್ಥಳಕ್ಕೆ ಬಿಳಿಗಿರಿರಂಗನಾಥ ಹುಲಿಸಂರಕ್ಷಿತ ಪ್ರದೇಶ ಚಾಮರಾಜನಗರ ವನ್ಯಜೀವಿ ವಿಭಾಗದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಂಕೆಗೆ ಢಿಕ್ಕಿ ಹೊಡೆದ ವಾಹವನನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಸಹಾಯಕ ಅರಣ್ಯಾಧಿಕಾರಿಗಳು ಮಂಜುನಾಥ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News