×
Ad

ಚಾಮರಾಜನಗರ | ದಟ್ಟ ಮಂಜು: ಡಿವೈಡರ್‌ಗೆ ಢಿಕ್ಕಿಯಾದ ಲಾರಿ; ಚಾಲಕನಿಗೆ ಗಾಯ

Update: 2026-01-04 11:04 IST

ಚಾಮರಾಜನಗರ:   ದಟ್ಟವಾದ ಮಂಜು ಆವರಿಸಿದ್ದ ಪರಿಣಾಮ ರಸ್ತೆ ಕಾಣದೆ ಟಾಟಾ ಈಚರ್ ಲಾರಿ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ತಾಲ್ಲೂಕಿನ ವೆಂಕಟಯ್ಯನ ಛತ್ರದ ಬಳಿ ನಡೆದಿದೆ.

ತಮಿಳುನಾಡಿನಿಂದ ವೆಸ್ಟ್ ಪೇಪರ್ ತುಂಬಿಕೊಂಡು ಬರುತ್ತಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಲಾರಿ ಚಾಲಕ ರಾಜಶೇಖರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅವೈಜ್ಞಾನಿಕವಾಗಿ ಅಳವಡಿಸಿರುವ ಡಿವೈಡರ್‌ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News