×
Ad

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಖಾತೆಯಿಂದ ಆಮಿಷ; ಸಾರ್ವಜನಿಕರು ಎಚ್ಚರ ವಹಿಸುವಂತೆ ಮನವಿ

Update: 2026-01-24 08:29 IST

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಶ್ರೀರೂಪ, ಭಾ.ಆ.ಸೇ., ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು “Ias Shree Roopa” ಎಂಬ ಹೆಸರಿನಲ್ಲಿ ದುರುದ್ದೇಶಪೂರಿತ ವ್ಯಕ್ತಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆಯಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಈ ನಕಲಿ ಫೇಸ್‌ಬುಕ್ ಖಾತೆಗೆ ಜಿಲ್ಲಾಧಿಕಾರಿಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಸದರಿ ನಕಲಿ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಸಾರ್ವಜನಿಕರಿಗೆ ವಿವಿಧ ರೀತಿಯ ಆಮಿಷಗಳನ್ನು ಒಡ್ಡಲಾಗುತ್ತಿದ್ದು, ಇದರಿಂದ ಜಿಲ್ಲಾಧಿಕಾರಿಗಳ ಗೌರವಕ್ಕೂ ಜಿಲ್ಲಾಡಳಿತದ ಪ್ರತಿಷ್ಠೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಜೊತೆಗೆ, ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಹಾಗೂ ಗೊಂದಲ ಉಂಟಾಗುವ ಆತಂಕವೂ ಕಂಡುಬಂದಿದೆ.

ಆದ್ದರಿಂದ ಸಾರ್ವಜನಿಕರು ಇಂತಹ ನಕಲಿ ಸಾಮಾಜಿಕ ಜಾಲತಾಣ ಖಾತೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಇದೇ ವೇಳೆ, ಇಂತಹ ನಕಲಿ ಖಾತೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News