×
Ad

ಚಾಮರಾಜನಗರ | ಕೌಟುಂಬಿಕ ಕಲಹ: ಪೊಲೀಸರ ಎದುರೇ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

Update: 2026-01-23 11:40 IST

ಚಾಮರಾಜನಗರ: ಗಂಡನ ಕುಡಿತದ ಚಟ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ತವರು ಮನೆಗೆ ಸೇರಿದ ಹಿನ್ನೆಲೆಯಲ್ಲಿ, ಆಕೆಯನ್ನು ಮರಳಿ ಕರೆತರುವಂತೆ ಗಲಾಟೆ ನಡೆಸಿದ ಪತಿ ಪೊಲೀಸರ ಎದುರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಧುವನಹಳ್ಳಿ ಗ್ರಾಮದ ಲೋಕೇಶ್ (45) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಕುಡಿತ ಹಾಗೂ ನಿರಂತರ ಜಗಳದಿಂದ ಬೇಸತ್ತ ಪತ್ನಿ ಕಾಮಗೆರೆಯಲ್ಲಿರುವ ತವರು ಮನೆಗೆ ತೆರಳಿದ್ದಳು. ಅಲ್ಲಿಗೂ ಬಂದ ಲೋಕೇಶ್ ಪತ್ನಿಯನ್ನು ಮನೆಗೆ ಬರುವಂತೆ ಒತ್ತಾಯಿಸಿ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ.

ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕೊಳ್ಳೇಗಾಲ ಪೊಲೀಸರು ಲೋಕೇಶ್‌ಗೆ ಬುದ್ಧಿ ಹೇಳಿ ವಾಪಸ್ಸು ಹೋಗುವಂತೆ ಸೂಚಿಸಿದ್ದಾರೆ. ಈ ವೇಳೆ ಪೊಲೀಸರ ಎದುರೇ ಬ್ಲೇಡ್‌ನಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

ಗಾಯಗೊಂಡ ಲೋಕೇಶ್‌ನನ್ನು ಮೊದಲು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News