ಚಾಮರಾಜನಗರ : ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರಿಗೆ ತೀವ್ರ ಗಾಯ
Update: 2026-03-10 13:11 IST
ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ವಾರ್ಡ್ ನಂ.16ರ ನಾಯಕರ ಬೀದಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಪರಮೇಶ್ ಸಿ ಮತ್ತು ಜ್ಯೋತಿ ಗಾಯಗೊಂಡವರು. ಸುಮಾರು 10.30ರ ವೇಳೆಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ.
ಗಾಯಾಳುಗಳನ್ನು ತಕ್ಷಣ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.