×
Ad

CHAMARAJANAGAR | ಮಲೆ ಮಹದೇಶ್ವರ ಬೆಟ್ಟದ ಬಳಿ ಯುವಕನೋರ್ವನನ್ನು ಹೊತ್ತೊಯ್ದ ಚಿರತೆ

Update: 2026-01-21 13:19 IST

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿನ ತಾಳಬೆಟ್ಟದಲ್ಲಿ ಚಿರತೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ ಎಂದು ಗುರುತಿಸಲಾಗಿದೆ.

ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ತಾಳಬೆಟ್ಟದ ಸಮೀಪ ಘಟನೆ ನಡೆದಿದೆ. ಏಕಾಏಕಿ ದಾಳಿ ನಡೆಸಿದ ಚಿರತೆ ಪ್ರವೀಣ್ ರನ್ನು ಅರಣ್ಯದೊಳಗೆ ಹೊತ್ತೊಯ್ದಿದೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪ್ರವೀಣ್ ಪತ್ತೆಗೆ ಶೋಧ ಕಾರ್ಯ ಕೈಗೊಂಡರು. ಸುಮಾರು ಒಂದು ಗಂಟೆಗಳ ಹುಡುಕಾಟದ ಬಳಿಕ ಮೃತದೇಹವನ್ನು ಪತ್ತೆಹಚ್ಚಿ ಮೇಲಕ್ಕೆತ್ತಿದರು.

ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News