ಚಾಮರಾಜನಗರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
Update: 2025-07-22 09:45 IST
ಚಾಮರಾಜನಗರ : ಕರುವನ್ನು ಬಲಿ ತೆಗೆದುಕೊಂಡಿದ್ದ ಚಿರತೆಯೊಂದು ಅರಣ್ಯ ಇಲಾಖೆಯವರು ಇಟ್ಟ ಬೋನಿಗೆ ಬಿದ್ದಿರುವ ಘಟನೆ ತಾಲ್ಲೂಕಿನ ಹರದನಹಳ್ಳಿ ಹೋಬಳಿಯ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳ ಹಿಂದೆ ಅಮಚವಾಡಿ ಗ್ರಾಮದ ಹನುಮಂತ ಶೆಟ್ಟಿ ಅವರಿಗೆ ಸೇರಿದ ಕರುವನ್ನು ಚಿರತೆಯೊಂದು ಬಲಿ ತೆಗೆದುಕೊಂಡಿತ್ತು. ಕರುವನ್ನು ಬಲಿ ತೆಗೆದುಕೊಂಡ ಚಿರೆತೆಯ ಕಾಟ ತಪ್ಪಿಸುವಂತೆ ಅರಣ್ಯ ಇಲಾಖೆಯವರನ್ನು ಗ್ರಾಮಸ್ಥರು ಒತ್ತಾಯಿಸಿದ್ದರು.
ಗ್ರಾಮಸ್ಥರ ಮನವಿಯಂತೆ ಅರಣ್ಯಾಧಿಕಾರಿಗಳು ಚಿರತೆಯ ಸೇರೆಗೆ ಬೋನಿಟ್ಟಿದ್ದರು. ಕೊನೆಗೂ ಚಿರತೆ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದಿದೆ.