×
Ad

Chamarajanagar | ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2025-11-18 18:52 IST

ಕೇತೇಗೌಡ (70) 

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೊಂಬೆಗಲ್ಲಿನ ಕೇತೇಗೌಡ (70) ಮೃತರು.

ಕೇತೇಗೌಡ ಕೆಲಸ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಒಡೆಯರಪಾಳ್ಯ ಗ್ರಾಮಕ್ಕೆ ಬರುತ್ತಿರುವಾಗ ಬೈಲೂರು ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಪ್ರಮೋದ್ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಘಟನೆ ನಡೆದಂತಹ ಕೆಲ ದೂರದಲ್ಲಿ ಕಾಡಾನೆ ಒಂದೆಡೆ ನಿಂತಿರುವ ಬಗ್ಗೆ ಅರಿತ ಸಿಬ್ಬಂದಿಗಳು ಆನೆಯನ್ನು ಕಾಡಿಗೆ ಓಡಿಸುವಲ್ಲಿ ಸಫಲರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News