×
Ad

ಚಾಮರಾಜನಗರ: ಅಣ್ಣನ ಮಗಳ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Update: 2024-08-14 14:42 IST

ಚಾಮರಾಜನಗರ: ಸ್ವಂತ ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಚಿಕ್ಕಪ್ಪನಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.

ಆರೋಪಿಯನ್ನು ವೆಂಕಟೇಶ್‌ ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯವನೇ ಆಗಿರುವ ಈತ, ಸ್ವಂತ ಅಣ್ಣನ ಮಗಳಾದ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಸಾಕ್ಷ್ಯಾಧಾರಗಳಿಂದ ಆರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾ‌ಯಾಧೀಶ ಎಸ್‌.ಜೆ.ಕೃಷ್ಣ ಅವರು ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News