×
Ad

ಚಾಮರಾಜನಗರ | ಹುಲಿ ಉಗುರು ಕಳ್ಳಸಾಗಣೆ : ಆರೋಪಿ ಬಂಧನ

Update: 2024-11-27 12:51 IST

ಚಾಮರಾಜನಗರ : ಇಲ್ಲಿನ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವನ್ಯಜೀವಿ ವಲಯದಲ್ಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿ, ಹುಲಿ ಉಗುರು ವಶಪಡಿಸಿಕೊಂಡ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಪುಣಜನೂರು ವಲಯದ ಬೂದಿ ಪಡಗ ಗ್ರಾಮದ ನಿವಾಸಿ ಚಿಕ್ಕಮಾದ ಎಂದು ಗುರುತಿಸಲಾಗಿದೆ. ಆರೋಪಿಯು ಐದು ಹುಲಿ ಉಗುರುಗಳನ್ನು ಮಾರಾಟ ಮಾಡಲು ತಮಿಳುನಾಡಿನ ಕಡೆಗೆ ತೆರಳುತ್ತಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಪುಣಜನೂರು ವನ್ಯಜೀವಿ ವಲಯದ ಅರಣ್ಯಧಿಕಾರಿ ಮಂಜುನಾಥ್ ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News