×
Ad

ಚಾಮರಾಜನಗರ | ಟ್ರ್ಯಾಕ್ಟರ್-ಬೈಕ್ ಢಿಕ್ಕಿ : ಓರ್ವನಿಗೆ ಗಾಯ

Update: 2025-11-07 14:57 IST

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಗುಂಡ್ಲುಪೇಟೆ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರೈತನೊರ್ವ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ  ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದ ಮಹೇಶ್ ಎಂಬ ರೈತ ಬೈಕ್‌ನಲ್ಲಿ ದೇವರಹಳ್ಳಿಯತ್ತ ತೆರಳುತ್ತಿದ್ದ ವೇಳೆ, ಜವರಹಳ್ಳಿ ಮೂಲದ ರೈತನಿಗೆ ಸೇರಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮಹೇಶ್ ಅವರಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ತಕ್ಷಣ ಗುಂಡ್ಲುಪೇಟೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News