×
Ad

ಚಾಮರಾಜನಗರ: ವಿಪರೀತ ಗಾಳಿಗೆ ಧರೆಗುರುಳಿದ ಮರಗಳು; ವಾಹನ ಸಂಚಾರ ಅಸ್ತವ್ಯಸ್ತ

Update: 2024-07-28 09:11 IST

ಚಾಮರಾಜನಗರ:  ವಿಪರೀತ ಗಾಳಿಯಿಂದಾಗಿ ಮರವೊಂದು ಮನೆಯ ಮೇಲೆ ಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.

 ಪುಟ್ಟಮ್ಮ ಎಂಬವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮೇಲ್ಛಾವಣಿ ಹಾನಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯ್ತಿ ಪರಿಮಿತಿಯ ಕರ್ನಾಟಕ ತಮಿಳುನಾಡು ಸಂಪರ್ಕದ ರಸ್ತೆ ಬಳಿಯ ಹೊಸದೊಡ್ಡಿ ಸಮೀಪದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದುದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಸಾರ್ವಜನಿಕರು ಮರವನ್ನು ತೆರವುಗೊಳಿಸಿದರು.

ವಿದ್ಯುತ್ ಕಂಬಗಳು ಸಹ ಧರೆಗುರಳಿದ್ದು, ವಿದ್ಯುತ್ ಕಡಿತವಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News