ಚಾಮರಾಜನಗರ | ಕೆರೆಯಲ್ಲಿ ಎರಡು ಮೊಸಳೆಗಳು ಪತ್ತೆ
Update: 2025-11-15 12:18 IST
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಂಟಳ್ಳಿ ಗ್ರಾಮದ ದೊಡ್ಡ ಕೆರೆಯ ತೀರದಲ್ಲಿ ಶುಕ್ರವಾರದಂದು ಮೊಸಳೆಯನ್ನು ಕಂಡ ಗ್ರಾಮಸ್ಥರು ಕೆಲಕಾಲ ಗಾಬರಿಗೊಂಡಿದ್ದಾರೆ.
ಈ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಬಳಿಕ ಸ್ಥಳಕ್ಕೆ ಧಾವಿಸಿದ ಗ್ರಾಪಂ ಸದಸ್ಯ ಶಿವು ಅವರು, ಕೆರೆಗೆ ಒಬ್ಬರೇ ಹೋಗದಂತೆ ಹಾಗೂ ಮಕ್ಕಳನ್ನು ನೀರಿನ ಪ್ರದೇಶದಿಂದ ದೂರ ಇರಿಸುವಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದಾರೆ.
ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.