×
Ad

ಚಾಮರಾಜನಗರ | ಪಾಲಾರ್ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸಾವು

Update: 2025-07-09 11:49 IST

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಾಲಾರ್ ಅರಣ್ಯ ಪ್ರದೇಶದ ದೊಡ್ಡಹಳ್ಳ ಗಸ್ತು ಬಳಿ ಸುಮಾರು 35 ವರ್ಷ ವಯಸ್ಸಿನ ಹೆಣ್ಣಾನೆಯೊಂದು ಮೃತ ಪಟ್ಟಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಕಾಡಾನೆ ಸ್ವಾಭಾವಿಕವಾಗಿ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. 

ಘಟನೆ ಸಂಬಂಧ ಮಾಹಿತಿ ತಿಳಿದ ತಕ್ಷಣ ಎಸಿಎಫ್ ಸ್ಟೇಪ್ಟಿನ್ಸ್, ಆರ್‌ಎಫ್‌ಒ ಉಮಾಪತಿ ಹಾಗೂ ವೈದ್ಯ ಡಾ.ಆದರ್ಶ ಅವರ ಸಮ್ಮುಖದಲ್ಲಿ ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News