ಚಾಮರಾಜನಗರ : ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ
Update: 2026-03-09 09:41 IST
ಚಾಮರಾಜನಗರ: ಅಮೇರಿಕಾ–ಇರಾನ್ ಯುದ್ಧದ ನೆಪವೊಡ್ಡಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರ ಹೆಚ್ಚಿಸಿರುವುದನ್ನು ಖಂಡಿಸಿ ಚಾಮರಾಜನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರತಿಭಟನೆ ನಡೆಯಿತು.
ಕೇಂದ್ರ ಸರ್ಕಾರವು ಯುದ್ಧದ ನೆಪವೊಡ್ಡಿ ರಾತ್ರೋರಾತ್ರಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಹೆಚ್ಚಿಸಿರುವುದು ಸರಿಯಲ್ಲ. ಕೂಡಲೇ ಗ್ಯಾಸ್ ದರ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಸಿಲಿಂಡರ್ ಹೊತ್ತು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನ, ಮಾಜಿ ನಗರಸಭಾ ಅಧ್ಯಕ್ಷೆ ಚಿನ್ನಮ್ಮ ಸಿದ್ದರಾಮಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸದಸ್ಯೆ ಉಮ್ಮತ್ತೂರು ಭಾಗ್ಯ, ರಾಜ್ಯ ಕಾರ್ಯದರ್ಶಿ ಕಾವೇರಿ ಶಿವಕುಮಾರ್ ಸೇರಿದಂತೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.