×
Ad

ಚಾಮರಾಜನಗರ | ಮಹದೇಶ್ವರ ದೇವಸ್ಥಾನದ ಸಮೀಪ ಹುಲಿ ಸಂಚಾರ : ಸ್ಥಳೀಯರಲ್ಲಿ ಆತಂಕ

Update: 2025-12-17 11:18 IST

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ರಸ್ತೆಯ ಮಹದೇಶ್ವರ ದೇವಾಲಯದ ಸಮೀಪ ಬೆಳ್ಳಂಬೆಳಿಗ್ಗೆ ಹುಲಿಯೊಂದು ರಸ್ತೆ ಸಮೀಪ ಸಂಚರಿಸಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಿಂದ ರಾಮಾಪುರ ಕಡೆಗೆ ತೆರಳುತ್ತಿದ್ದ ಬಸ್‌ ಸಮೀಪದಲ್ಲೇ ಹುಲಿ ನಡೆದುಕೊಂಡು ಹೋಗಿರುವುದು ಕಂಡುಬಂದಿದ್ದು, ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಆತಂಕಗೊಂಡರು.

ಇನ್ನು ಕೆಲವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ವೀಡಿಯೊ ಮಾಡಿದ್ದಾರೆ. ಇದೇ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಸುಮಾರು ಐದು ತಿಂಗಳ ಹಿಂದೆ ಐದು ಹುಲಿಗಳು ವಿಷಪ್ರಯೋಗದಿಂದ ಮೃತಪಟ್ಟಿದ್ದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಹುಲಿಯ ಚಲನವಲನ ಕಂಡುಬಂದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News