ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ –ಗುಂಡ್ಲುಪೇಟೆ ರಸ್ತೆಯಲ್ಲಿರುವ ಶ್ರೀ ಆಂಜನೇಯ ದೇವಾಲಯದ ಮುಂಭಾಗ ಮಾಂಸದ ತುಂಡು ಬಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಶ್ರೀ ಆಂಜನೇಯ ದೇವಸ್ಥಾನ ಮುಂಭಾಗ ಮಾಂಸದ ತ್ಯಾಜ್ಯದ ತುಂಡು ಬಿದ್ದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ, ಧಾರ್ಮಿಕ ಆಚರಣೆಗೆ ದಕ್ಕೆಯಾಗುತ್ತಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕೂಲಂಕುಷವಾಗಿ ಪರಿಶೀಲನೆಗಾಗಿ ದೇವಾಲಯದ ಸುತ್ತ ಮುತ್ತಲಿನ ಸಿಸಿ ಕ್ಯಾಮರಾಗಳನ್ನು ಪರಿಶೀಸಲಾಗಿ ಅದರಲ್ಲಿ ನಾಯಿಯೊಂದು ಮಾಂಸದ ತುಂಡನ್ನು ತೆಗೆದುಕೊಂಡು ಹೋಗುವಾಗ ದೇವಾಲಯದ ಮುಂಭಾಗದ ಬದಿಯಲ್ಲಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಪೋಟೋಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಸಾರ್ವಜನಿಕರು ತಪ್ಪು ಕಲ್ಪನೆ ಮಾಡಿಕೊಳ್ಳಬಾರದೆಂದು ಪೊಲೀಸ್ ಇಲಾಖೆ ತಿಳಿಸಿದೆ.

ಈ ಸಂಬಂಧ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ನಾ.ಅಶ್ವಥ್ ಕುಮಾರ್/ವಾರ್ತಾಭಾರತಿ

ಚಾಮರಾಜನಗರ ಜಿಲ್ಲಾ ವರದಿಗಾರರು

ನಾ.ಅಶ್ವಥ್ ಕುಮಾರ್ 1989 ರಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 17 ವರ್ಷಗಳಿಂದ ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಚಾಮರಾಜನಗರ ಹಿರಿಯ ಜಿಲ್ಲಾ ವರದಿಗಾರರಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಮಾನವೀಯತೆ ಸುದ್ದಿ ಮಾಡುವುದು ಇವರ ಹವ್ಯಾಸ.