ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ ವಲಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯ ಕಳೇಬರ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗೀ ಸರ್ವೇ ನಂಬರ್‌ನಲ್ಲಿ ಸುಮಾರು 35 ವರ್ಷ ವಯಸ್ಸಿನ ಆನೆ ಕಳೇಬರ ಪತ್ತೆಯಾಗಿದ್ದು, ಮೃತ ಆನೆಯ ಹೊಟ್ಟೆಯಲ್ಲಿ ಒಂದು ವರ್ಷ ವಯಸ್ಸಿನ ಮರಿಯಿರುವುದು ಕಂಡುಬಂದಿತು. ಕಾಡಾನೆಯೊಂದು ಬೆನ್ನಿಗೆ ಸೊಂಡಿಲಿನಿಂದ ಹೊಡೆದ ರಭಸಕ್ಕೆ ಮೂಳೆ ಮುರಿದು ಸಾವಿಗೀಡಾಗಿದೆ ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor