×
Ad

ಹನೂರು | ಲಾರಿ–ಟೆಂಪೋ ಟ್ರಾವೆಲರ್‌ ನಡುವೆ ಢಿಕ್ಕಿ: 12 ಮಂದಿಗೆ ಗಾಯ

Update: 2025-11-08 17:41 IST

ಹನೂರು : ತಾಲೂಕಿನ ಎಲ್ಲೆಮಾಳ–ಮಲ್ಲಯ್ಯನಪುರ ಮಾರ್ಗದ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯಲ್ಲಿ ಲಾರಿ ಹಾಗೂ ಟೆಂಪೋ ಟ್ರಾವೆಲರ್‌ ನಡುವೆ ಅಪಘಾತ ಸಂಭವಿಸಿ ಸುಮಾರು 12ಕ್ಕೂ ಅಧಿಕ ಮಂದಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು ಮೂಲದ ಎಲೆಕ್ಟ್ರಾನಿಕ್ ಸಿಟಿಯ ನಿವಾಸಿಗಳು ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಪೂಜೆಮುಗಿಸಿ ವಾಪಸ್ ತೆರಳುತ್ತಿದ್ದಾಗ ಎಲ್ಲೆಮಾಳ–ಮಲ್ಲಯ್ಯನಪುರದ ಮಧ್ಯೆ ಕೌದಳ್ಳಿಯತ್ತ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿ ಮತ್ತು ಟೆಂಪೋ ಟ್ರಾವೆಲ್ ಮುಖಾಮುಖಿ ಢಿಕ್ಕಿ ಹೊಡೆದಿವೆ ಎನ್ನಲಾಗಿದೆ.

ಈ ಘಟನೆಯಲ್ಲಿ ಟೆಂಪೋ ಚಾಲಕ ಏಕನಾಥ್ ಅವರಿಗೆ ಗಂಭೀರ ಗಾಯವಾಗಿದ್ದು, ಇನ್ನೂ 11ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯರು ತಕ್ಷಣವೇ ಖಾಸಗಿ ವಾಹನಗಳ ಮೂಲಕ ಕೊಳ್ಳೇಗಾಲದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ.

ಅಪಘಾತದ ಪರಿಣಾಮ ಸ್ಥಳದಲ್ಲಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿ, ರಾಮಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ರಾಫಿಕ್ ನಿಯಂತ್ರಿಸಿ ಸಂಚಾರವನ್ನು ಸರಾಗಗೊಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News