×
Ad

ಹನೂರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮುರಿದುಬಿದ್ದ ಕಂಬ; ಐವರು ಪ್ರಯಾಣಿಕರು ಪಾರು

Update: 2024-05-29 11:02 IST

ಚಾಮರಾಜನಗರ, ಮೇ 29: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದ ಘಟನೆ ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಐವರು ಕಾರಿನಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹನೂರು ಮಾರ್ಗವಾಗಿ ಮಳವಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದುತಿಳಿದುಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News