ಹನೂರು | ಶ್ರೀಗಂಧದ ಮರ ಕಳ್ಳತನ; ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಆರೋಪ
ಹನೂರು: ಪಟ್ಟಣದ ಅಜ್ಜಿಪುರ ರಸ್ತೆಯಲ್ಲಿ ಅರಣ್ಯ ಇಲಾಖೆಗೆ ಸೇರಿರುವ ನರ್ಸರಿ ಮುಂಭಾಗ ಕಿಡಿಗೇಡಿಗಳು ಶ್ರೀಗಂಧದ ಮರವನ್ನು ತುಂಡರಿಸಿ ಕಳ್ಳತನ ಮಾಡಿದ್ದಾರೆ.
ಘಟನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ನಿರ್ಲಕ್ಷತನವೇ ಕಾರಣ ಎಂದು ನಾಗರಿಕರು ಆರೋಪಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಂಡು ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.