ಹನೂರು ಶೂಟೌಟ್ ಪ್ರಕರಣ : ಮೃತದೇಹಗಳು ಸ್ವಗ್ರಾಮಕ್ಕೆ

Update: 2026-08-17 07:21 IST

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಶ್ಯಾಗ ಗ್ರಾಮದ ಸಮೀಪದ ಮರಿಯಮಂಗಲದಲ್ಲಿ ಶನಿವಾರ ಮುಂಜಾನೆ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಆಂತೋಣಿ ಸ್ವಾಮಿ, ಪೀಟರ್ ಹಾಗೂ ಕುಮಾರ್ ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ಬಳಿಕ ರವಿವಾರ ರಾತ್ರಿ ಪೊಲೀಸ್ ಬಂದೋಬಸ್ತ್‌ನಲ್ಲಿ ತವರೂರಿಗೆ ತರಲಾಯಿತು.

ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ರವಿವಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹಗಳನ್ನು ಪೊಲೀಸ್ ಭದ್ರತೆಯಲ್ಲಿ ಹನೂರು ತಾಲ್ಲೂಕಿನ ತೊಮಿಯರ್ ಪಾಳ್ಯ ಬಳಿಯ ಅವರ ನಿವಾಸಗಳಿಗೆ ತರಲಾಯಿತು.

ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಮೃತರ ಮನೆಗಳ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News