ಹನೂರು ಶೂಟೌಟ್ ಪ್ರಕರಣ; ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲು

Update: 2026-08-16 00:09 IST

ಹನೂರು ಪೊಲೀಸ್ ಠಾಣೆ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವಾಪ್ತಿಯ ಮರಿಯ ಮಂಗಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​​​​ಐಆರ್ ದಾಖಲಾಗಿದೆ.

ಪ್ರಾಣಿ ಬೇಟೆಗೆ ಬಂದಿದ್ದಾರೆಂದು ಅರಣಾಧ್ಯಿಕಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಮೃತ ಆಥೋಣಿಸಾಮಿ ಪತ್ನಿ ಲೂರ್ದಾಮೇರಿ ದೂರಿನ ಆಧಾರದಲ್ಲಿ ಚಾಮರಾಜನಗರದ ಹನೂರು ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದೆ.

ದಕ್ಷಿಣ ವಲಯ ಐಜಿ ಬೋರಲಿಂಗೇಗೌಡ, ಚಾಮರಾಜನಗರ ಎಸ್ಪಿ ಮುತ್ತುತಾಜು ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹನೂರು ವಿಭಾಗ ಎಂದು ಆರೋಪಿಗಳನ್ನಾಗಿಸಿ ಕೇಸ್‌ ದಾಖಲಿಸಲಾಗಿದೆ. ನಿರ್ದಿಷ್ಟ ಹೆಸರು ನಮೂದಿಸದೇ ಅರಣ್ಯ ಅಧಿಕಾರಿಗಳು ಎಂದು ಎಫ್​​​ಐಆರ್​​​​​ನಲ್ಲಿ ನಮೂದಿಸಲಾಗಿದೆ. ಬಿಎನ್ ಎಸ್ 103(1) ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News