ಚಾಮರಾಜನಗರ | ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಚಾಲಕ ಅಪಾಯದಿಂದ ಪಾರು
Update: 2025-02-20 16:13 IST
ಚಾಮರಾಜನಗರ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ಹೆದ್ದಾರಿಯ ಉಡಿಗಾಲ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಗಣೇಶ್ ಎಂಬವರು ತಮ್ಮ ಕಾರಿನಲ್ಲಿ ಚಾಮರಾಜನಗರಕ್ಕೆ ತರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಇಂಜಿನ್‌ನಲ್ಲಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆಯೇ ಉರಿದಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಗಣೇಶ್ ಕಾರಿನಿಂದ ಇಳಿದು ದೂರು ತೆರಳಿದರು. ಆದರೆ, ಕಾರು ಸಂಪೂರ್ಣ ಸುಟ್ಟು ಹೋಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.