×
Ad

ಹನೂರು | ಸಾರಿಗೆ ಬಸ್‌ಗೆ ಸಿಲುಕಿ ರಸ್ತೆ ದಾಟುತ್ತಿದ್ದ ಗರ್ಭಿಣಿ ಮಹಿಳೆ ಮೃತ್ಯು

Update: 2024-08-07 19:57 IST

 ನಮಿತಾ( 22)

ಹನೂರು :‌ ರಸ್ತೆ ದಾಟುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಸಾರಿಗೆ ಬಸ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಜರುಗಿದ್ದು, ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ‌ ನೆಡೆಸಿದ ಪ್ರಸಂಗ ಬುಧವಾರ  ನಡೆದಿದೆ.

ಮೃತ ಯುವತಿಯನ್ನು ಅಜ್ಜಿಪುರ ಗ್ರಾಮದ ನಮಿತಾ( 22) ಎಂದು ಗುರುತಿಸಲಾಗಿದೆ. ಎರಡು ತಿಂಗಳ ಗರ್ಭಿಣಿಯಾಗಿದ್ದ ನಮಿತಾ ತಪಾಸಣೆಗೆಂದು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆಗಮಿಸಿದ್ದರು. ವೈದ್ಯಕೀಯ ತಪಾಸಣೆ ಮುಗಿಸಿ ತಮ್ಮ ಗ್ರಾಮಕ್ಕೆ ವಾಪಾಸ್‌ ತೆರಳಲು ರಸ್ತೆ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಗ್ರಾಮಸ್ಥರಿಂದ ಪ್ರತಿಭಟನೆ:

ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಹಾಗು ಮೃತ ಯುವತಿಯ ಸಂಬಂಧಿಕರು ರಸ್ತೆ ತಡೆ ನಡೆಸಿ, ಸಾರಿಗೆ ಇಲಾಖೆ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಬಸ್ ಚಾಲಕನ ಬೇಜವಾಬ್ದಾರಿತನ ಮತ್ತು ಅತೀವೇಗದಿಂದಲೇ ಈ ಘಟನೆ‌ ಸಂಭವಿಸಿದೆ ಎಂದು ದೂರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News