Kollegala | ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ
Update: 2026-02-15 15:35 IST
ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ಸಮೀಪ ಇರುವ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಗುಂಡಾಲ್ ಜಲಾಶಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.
ಜಲಾಶಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದ್ದು, ಹುಲಿ ಸಹಜವಾಗಿ ಸಾವನ್ನಪ್ಪಿದೆಯೇ ಅಥವಾ ಕಳ್ಳ ಬೇಟೆಗಾರರು ಹತ್ಯೆ ಮಾಡಿದ್ದಾರೆಯೇ ಎಂದು ಶಂಕೆ ಮೂಡಿದೆ.
ಹುಲಿಯ ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನದ ಪ್ರಯೋಗಾಲಯದಿಂದ ವರದಿ ಬಂದ ಬಳಿಕವೇ ಹುಲಿ ಸಾವಿಗೆ ನಿಖರ ಕಾರಣ ತಿಳಿಯಲಿದೆ.