×
Ad

Kollegala | ಗುಂಡಾಲ್ ಜಲಾಶಯಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣ; ಓರ್ವನ ಬಂಧನ

Update: 2026-02-20 16:04 IST

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿದ ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಜಲಾಶಯಲ್ಲಿ ಪತ್ತೆಯಾಗಿದ್ದ ಗಂಡು ಹುಲಿ ಸಾವಿಗೆ ಕಾರಣನಾದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡಾಲ್ ಜಲಾಶಯಲ್ಲಿ ಫೆ. 15 ರಂದು ಗಂಡು ಹುಲಿಯ ಮೃತ ದೇಹ ಪತ್ತೆಯಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡು ವನ್ಯ ಜೀವಿಗಳ ಭೇಟೆಯಾಡುತ್ತಿದ್ದ ಕೊಂಗರಹಳ್ಳಿ (ಕಾಮಗೆರೆ) ಗ್ರಾಮದ ಕುಮಾರ ಬಿನ್ ಸೋಮಣ್ಣ ರವರನ್ನು ಬಂಧಿಸಿ ವ ವಿಚಾರಣೆ ನಡೆಸಿದ ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News