×
Ad

Kollegala | ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಇಬ್ಬರು ಮೃತ್ಯು, 40ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Update: 2026-06-29 20:19 IST

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, 40ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ- ದೊಡ್ಡಿಂದುವಾಡಿ ಮಾರ್ಗದ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.

ಕೊಳ್ಳೇಗಾಲ ಪಟ್ಟಣದ ಪುಟ್ಟನಂಜಮ್ಮ (60) ಹಾಗೂ ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ನಿವಾಸಿ ಮಹೇಶ್ (55) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುವಾಗ ಬಸ್​​ನ ಮುಂಭಾಗದ ಚಕ್ರ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣಕ್ಕೆ ಸಿಗದೇ ರಸ್ತೆಬದಿಯ ಹಳ್ಳಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.‌

ಅಪಘಾತ ನಡೆದ ಸ್ಥಳಕ್ಕೆ ಚಾಮರಾಜನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಕೊಳ್ಳೇಗಾಲ ತಹಸಿಲ್ದಾರ್ ಬಸವರಾಜು, ಇತರ ಅಧಿಕಾರಿಗಳು ಭೇಟಿ‌ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಎಸ್​​ಪಿ ಮುತ್ತುರಾಜ್ ಆಸ್ಪತ್ರೆಗೂ ತೆರಳಿ ಗಾಯಾಳುಗಳನ್ನು ವಿಚಾರಿಸಿದ್ದಾರೆ‌. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News